ಬೆಂಗಳೂರು: ಅಮೆರಿಕಾ ಉಪಾಧ್ಯಕ್ಷೆ, ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಯೂ ಅಗಿರುವ ಕಮಲಾ ಹ್ಯಾರಿಸ್ ಆಹ್ವಾನ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ.
ಕಮಲಾ ಹ್ಯಾರಿಸ್ ತಾಯಿ ಶ್ಯಾಮಲಾ ಗೋಪಾಲನ್ ಅವರ ಟ್ರಸ್ಟ್ ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ನೆರವು ನೀಡಿರುವ ಹಿನ್ನೆಲೆಯಲ್ಲಿ ಅವರ ಟ್ರಸ್ಟ್ ಜೊತೆಡಿ.ಕೆ.ಶಿವಕುಮಾರ್ ಉತ್ತಮ ಸಂಬಂಧ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕಮಲಾ ಹ್ಯಾರಿಸ್ ನಾರ್ಥ್ ಕ್ಯಾರೊಲಿನಾದಲ್ಲಿ ಆಯೋಜಿಸಿರುವ ಖಾಸಗಿ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕುಟುಂಬ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಇಂದು ರಾತ್ರಿ ಅಮೆರಿಕಾಗೆ ತೆರಳಲಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಜಾಪ್ರಭುತ್ವ-ಚುನಾವಣೆ ಸಂವಾದದಲ್ಲಿಯೂ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ. ಬಳಿಕ ಚಿಕಾಗೊಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅಮೆರಿಕ ಮಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕೂಡ ಭೇಟಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.