
ಬೆಂಗಳೂರು: ದೇಶ ವಿಭಜನೆ ಹೇಳಿಕೆ ನೀಡಿರುವ ಸಂಸದ ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ಕಾರ್ಯಕರ್ತರು ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಸಂಸದ ಡಿ.ಕೆ.ಸುರೇಶ್ ನಿವಾಸದ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಡಿ.ಕೆ.ಸುರೇಶ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಏಕಾಏಕಿ ಡಿ.ಕೆ.ಸುರೇಶ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ತಡೆಯೊಡ್ಡಿದ್ದಾರೆ. ಬಿಜೆಪಿಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ಬಸ್ ಗಳಲ್ಲಿ ತುಂಬಿ ಕರೆದೊಯ್ದಿದ್ದಾರೆ. ಕೆಲ ಕಾರ್ಯಕರ್ತರು ಪೊಲಿಸರಿಂದ ತಪ್ಪಿಸಿಕೊಂಡು ಓಡಿ ಎಸ್ಕೇಪ್ ಆಗಿದ್ದಾರೆ.