ನವದೆಹಲಿ : ಬಜೆಟ್ ಘೋಷಣೆ ಬೆನ್ನಲ್ಲೇ ಸಂಸದ ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕವಾಗಿ ತೊಂದರೆಯಾಗುತ್ತಿದೆ ಎಂದರು. ಹೀಗೆ ಮುಂದುವರೆದರೆ ದಕ್ಷಿಣ ಭಾರತದ ಪ್ರತ್ಯೇಕ ಕೂಗು ಎತ್ತಬೇಕಾಗುತ್ತದೆ ಎಂದರು. ಕೇಂದ್ರ ಸರ್ಕಾರದ ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬೇಕು. ದಕ್ಷಿಣ ಭಾರತದ ಹಣವನ್ನು ದಕ್ಷಿಣ ಭಾರತಕ್ಕೆ ಖರ್ಚು ಮಾಡಬೇಕು ಎಂದರು.
ಈ ಬಜೆಟ್ ನಲ್ಲಿ ಚುನಾವಣೆಗೆ ಸಂಬಂಧಪಟ್ಟ ಕೆಲವು ಘೋಷಣೆಗಳು ಆಗಿದೆ ಅಷ್ಟೇ, ಬರೀ ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ ಅಷ್ಟೇ ಎಂದು ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.