
ಬೆಂಗಳೂರು: ಬಿಜೆಪಿ ಶಸಾಕ ಮುನಿರತ್ನ ತಲೆಗೆ ಮೊಟ್ಟೆ ಏಟು ಬಿದ್ದಿರುವುದರಿಂದ ತಲೆಕೆಟ್ಟು ಹೋಗಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರುನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ಶಾಸಕ ಮುನಿರತ್ನ ಅವರು ಬೆಂಗಳೂರು ಅಭಿವೃದ್ಧಿಯಾಗುತ್ತಿಲ್ಲ. ಸುಮಾರು 20 ವರ್ಷಗಳ ಹಿಂದಕ್ಕೆ ಹೋಗಿದೆ. ಶೇ.35 ರಷ್ಟು ಲಂಚ ಕೇಳುತ್ತಿದ್ದಾರೆ ಎನ್ನುವ ಮುನಿರತ್ನ ಆರೋಪಕ್ಕೆ, ಲೋಕಸಭಾ ಸದಸ್ಯರಾದ ತಜ್ಞ ವೈದ್ಯರೊಬ್ಬರು ಮುನಿರತ್ನ ಅವರ ತಲೆಗೆ ಮೊಟ್ಟೆ ಏಟು ಬಿದ್ದು, ಆಸಿಡ್ ದಾಳಿಯಾಗಿ ಪೆಟ್ಟು ಬಿದ್ದಿದೆ. ತಲೆಗೆ ಏಟಾಗಿ ಒಂದೆರಡು ಇಂಚು ಒಳಗೆ ಹೋಗಿದೆ, ಹೀಗಾಗಿ ತಲೆಕೆಟ್ಟು ಹೋಗಿದೆ. ಹಾಗಾಗಿ ಅವರು ಮತ್ತೊಮ್ಮೆ ಪರಿಶೀಲಿಸಿಕೊಳ್ಳಬೇಕು ಎಂದರು.
ಬೆಂಗಳೂರು ಹೈದರಾಬಾದ್ ಗಿಂತ ಹಿಂದಕ್ಕೆ ಉಳಿದಿದೆ ಎಂದು ಹೇಳಿದ್ದರಿಂದ ನನ್ನ ಮೇಲೆ ಮತ್ತೆ ಕೇಸ್ ದಾಖಲಾದರೂ ಆಗಬಹುದು ಎಂದಿರುವ ಮುನಿರತ್ನ ಹೇಳಿಕೆಗೆ, ಅವರು ಮೊದಲೇ ಮಾಡಿಟ್ಟುಕೊಂಡಿರುವ ಕುತಂತ್ರಗಳನ್ನು ಈ ರೀತಿ ಸಾರ್ವಜನಿಕವಾಗಿ ತಿಳಿಸುತ್ತಿದ್ದಾರೆ. ಅವರು ನಡೆದು ಬಂದ ದಾರಿ ನೋಡಿದರೆ ಎಲ್ಲವೂ ತಿಳಿಯುತ್ತದೆ. ಅವರು ಯಾವ ಠಾಣೆಗಳಲ್ಲಿ ಇರುತ್ತಿದ್ದರು ಎನ್ನುವ ಇತಿಹಾಸವಿದೆ. ಈಗ ಪಲಾಯನ ಮಾಡಲು ಈ ರೀತಿಯ ಹೇಳಿಕೆಗಳನ್ನು ಮುಂಚಿತವಾಗಿಯೇ ನೀಡುತ್ತಿದ್ದಾರೆ ಎಂದು ಹೇಳಿದರು.