alex Certify BIG NEWS: ಬಿಜೆಪಿಯವರಿಗೆ ಆಪರೇಷನ್ ಕಮಲ ಬಿಟ್ರೆ ಬೇರೆ ಏನಾದರೂ ಗೊತ್ತಿದೆಯಾ? ಡಿ.ಕೆ. ಸುರೇಶ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿಯವರಿಗೆ ಆಪರೇಷನ್ ಕಮಲ ಬಿಟ್ರೆ ಬೇರೆ ಏನಾದರೂ ಗೊತ್ತಿದೆಯಾ? ಡಿ.ಕೆ. ಸುರೇಶ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರಿಗೆ ಆಪರೇಷನ್ ಬಿಟ್ಟರೆ ಬೇರೆ ಏನಾದರೂ ಗೊತ್ತಿದೆಯಾ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯಿಂದ ಮತ್ತೆ ಆಪರೇಷನ್ ಕಮಲ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಡಿ.ಕೆ.ಸುರೇಶ್, ಜನರಿಗೆ ಏನು ಬೇಕು ಅದನ್ನು ಮಾಡುವುದು ಬಿಜೆಪಿಗೆ ಗೊತ್ತಿಲ್ಲ. ಆಪರೇಷನ್ ಕಮಲ ಬಿಟ್ಟರೆ ಬೇರೇನು ಗೊತ್ತು? ಎಂದು ಕೇಳಿದ್ದಾರೆ.

ಬಿಜೆಪಿಯವರು ಭ್ರಷ್ಟಾಚಾರದಲ್ಲಿ ಮುಳುಗಿದ್ದರಿಂದ ಇಂದು ಕೆಲಸ ಇಲ್ಲದೇ ಕೂತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ಆಘಾತವಾಗಿದೆ. ಆಘಾತ ತಪ್ಪಿಸಿಕೊಳ್ಳಲು ಆಪರೇಷನ್ ಕಮಲದ ಹೆಸರು ಹೇಳುತ್ತಿದ್ದಾರೆ ಎಂದರು.

ವಿಪಕ್ಷ ನಾಯಕರು ಇದ್ದಾರೋ ಇಲ್ಲವೋ ಅವರಿಗೆ ಬಿಟ್ಟದ್ದು. ಆದರೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದರೂ ಇಟ್ಟುಕೊಂಡು ನಮ್ಮ ತಟ್ಟೆಯಲ್ಲಿನ ಜಿರಳೆ ಹುಡುಕಿದರೆ ನಾವೇನು ಮಾಡಲು ಆಗುತ್ತೆ? ಎಂದು ವ್ಯಂಗ್ಯವಾಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...