ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್. ಜೀವರಾಜ್ ಅವರನ್ನು ನೇಮಕ ಮಾಡಲಾಗಿದೆ.
ಜೀವರಾಜ್ ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡುವ ಕುರಿತು ಎರಡು ದಿನಗಳ ಹಿಂದೆಯೇ ಸುದ್ದಿ ಹರಿದಾಡಿತ್ತು. ಚಿಕ್ಕಮಗಳೂರು ಜಿಲ್ಲೆ ಪ್ರತಿನಿಧಿಸುತ್ತಿದ್ದ ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಇತ್ತೀಚೆಗೆ ಬಿಡಿಎ ಅಧ್ಯಕ್ಷರಾಗಿ ನೇಮಕವಾದ ನಂತರ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಚಿಕ್ಕಮಗಳೂರು ಜಿಲ್ಲೆಗೆ ಪ್ರಾತಿನಿಧ್ಯ ಕಲ್ಪಿಸಲು ಜೀವರಾಜ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಹೇಳಲಾಗಿದೆ.