alex Certify BREAKING: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಜೀವರಾಜ್ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಜೀವರಾಜ್ ನೇಮಕ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್. ಜೀವರಾಜ್ ಅವರನ್ನು ನೇಮಕ ಮಾಡಲಾಗಿದೆ.

ಜೀವರಾಜ್ ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡುವ ಕುರಿತು ಎರಡು ದಿನಗಳ ಹಿಂದೆಯೇ ಸುದ್ದಿ ಹರಿದಾಡಿತ್ತು. ಚಿಕ್ಕಮಗಳೂರು ಜಿಲ್ಲೆ ಪ್ರತಿನಿಧಿಸುತ್ತಿದ್ದ ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಇತ್ತೀಚೆಗೆ ಬಿಡಿಎ ಅಧ್ಯಕ್ಷರಾಗಿ ನೇಮಕವಾದ ನಂತರ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಚಿಕ್ಕಮಗಳೂರು ಜಿಲ್ಲೆಗೆ ಪ್ರಾತಿನಿಧ್ಯ ಕಲ್ಪಿಸಲು ಜೀವರಾಜ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...