ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ.
ರೋಹಿಣಿ ಸಿಂಧೂರಿ ವಿರುದ್ಧದ ಪೋಸ್ಟ್ ಡಿಲಿಟ್ ಮಾಡಲು ಸುಪ್ರೀಂಕೋರ್ಟ್ ಡಿ. ರೂಪಾ ಅವರಿಗೆ ಸೂಚನೆ ನೀಡಿದೆ.
24 ಗಂಟೆಯೊಳಗೆ ಪೋಸ್ಟ್ ಡಿಲಿಟ್ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್ ಗಳನ್ನು ಡಿಲಿಟ್ ಮಾಡಬೇಕು. ಎಲ್ಲಾ ಪೋಸ್ಟ್ ಅಳಿಸುವುದು ಅಸಾಧ್ಯವಾದರೆ ಎಲ್ಲಾ ಕಾಮೆಂಟ್ ಗಳನ್ನು ಹಿಂಪಡೆಯುತ್ತಿದ್ದೇನೆ ಎಂದು ಪೋಸ್ಟ್ ಹಾಕಬೇಕು. ತಮ್ಮ ಹೇಳಿಕೆ ಪಡೆದಿದ್ದೇನೆ ಎಂಬ ಕನಿಷ್ಠ ಪೋಸ್ಟ್ ಹಾಕಬೇಕೆಂದು ರೂಪಾ ಅವರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮತ್ತು ನ್ಯಾಯಮೂರ್ತಿ ಪಂಕಜ್ ಮಿಥಾಲ್ ಅವರಿದ್ದ ಪೀಠದಿಂದ ಈ ಬಗ್ಗೆ ಮೌಖಿಕ ನಿರ್ದೇಶನ ನೀಡಲಾಗಿದೆ.
ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ ದೂರು ದಾಖಲಿಸಿದ್ದರು. ರೋಹಿಣಿ ಸಿಂಧೂರಿ ದಾಖಲಿಸಿರುವ ದೂರು ರದ್ದುಗೊಳಿಸುವಂತೆ ಡಿ. ರೂಪಾ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.