alex Certify ಒಳಗೊಳಗೆ ಕಾಲೆದುಕೊಳ್ಳುತ್ತಿರುವ ಸಿದ್ಧರಾಮಯ್ಯ, ಡಿಕೆಶಿ: ಕಾಂಗ್ರೆಸ್ ಧೂಳೀಪಟ; ಸದಾನಂದಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಳಗೊಳಗೆ ಕಾಲೆದುಕೊಳ್ಳುತ್ತಿರುವ ಸಿದ್ಧರಾಮಯ್ಯ, ಡಿಕೆಶಿ: ಕಾಂಗ್ರೆಸ್ ಧೂಳೀಪಟ; ಸದಾನಂದಗೌಡ

ಬೀದರ್: ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಘೋಷಣೆ, ಭಾಷಣದಿಂದ ಚುನಾವಣೆ ಮಾಡುತ್ತಿದೆ. ಹಸಿವು, ಬಡತನ ನೀಗಿಸುವ ಕೆಲಸವನ್ನು ಕಾಂಗ್ರೆಸ್ ಮಾಡಲಿಲ್ಲ ಎಂದು ಟೀಕಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಒಳಗೊಳಗೆ ಕಬಡ್ಡಿ ಆಡುತ್ತಿದ್ದಾರೆ. ಒಬ್ಬರ ಕಾಲು ಒಬ್ಬರು ಎಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ನೈಟ್ ಕರ್ಫ್ಯೂ ಬಗ್ಗೆ ಕಾಂಗ್ರೆಸ್ ನಾಯಕರು ಟೀಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸದಾನಂದಗೌಡ, ಕಾಂಗ್ರೆಸ್ ನವರು ಕಣ್ಣಿದ್ದೂ ಕೂಡ ಕುರುಡರ ಹಾಗೆ ಮಾತನಾಡುವುದು ಸರಿಯಲ್ಲ. ಮಹಾರಾಷ್ಟ್ರ, ಪಂಜಾಬ್ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರಗಳಿವೆ. ಕಾಂಗ್ರೆಸ್ ಸರ್ಕಾರಗಳಿರುವ ರಾಜ್ಯಗಳಲ್ಲಿ ಏಕೆ ನೈಟ್ ಕರ್ಫ್ಯೂ ಹೇರಿದ್ದಾರೆ? ರಾತ್ರಿ ಸಮಾರಂಭ, ಪಾರ್ಟಿಗಳು ಹೆಚ್ಚಾಗಿ ನಡೆಯುತ್ತವೆ. ಇದರಿಂದ ಕೊರೋನಾ ಹರಡುತ್ತೆ ಎಂದು ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...