ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇಕಡ 3ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಹಾಲಿ ಶೇಕಡ 42ರಷ್ಟು ಇರುವ ತುಟ್ಟಿ ಭತ್ಯೆ ಶೇಕಡ 45ಕ್ಕೆ ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ.
ಈ ಮೂಲಕ ಕೇಂದ್ರ ಸರ್ಕಾರ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಕಳೆದ ಮಾರ್ಚ್ ನಲ್ಲಿ ತುಟ್ಟಿ ಭತ್ಯೆಯನ್ನು ಶೇಕಡ 4ರಷ್ಟು ಹೆಚ್ಚಳ ಮಾಡಲಾಗಿತ್ತು. ಶೇಕಡ 38 ರಿಂದ ಶೇಕಡ 42ರಷ್ಟು ಏರಿಕೆ ಮಾಡಲಾಗಿದ್ದು, ಈಗ ಶೇಕಡ 3ರಷ್ಟು ಏರಿಕೆ ಮಾಡಲು ಮುಂದಾಗಿದೆ. ಜುಲೈ ಒಂದರಿಂದಲೇ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.
ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆ ಹೆಚ್ಚಳದ ಲಾಭ ಸಿಗಲಿದೆ. ಪ್ರತಿ ವರ್ಷ ಎರಡು ಬಾರಿ ತುಟ್ಟಿ ಭತ್ಯೆ ಪರಿಷ್ಕರಣೆ ಮಾಡಲಾಗುತ್ತದೆ.