ನವದೆಹಲಿ: ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
ಕೇಂದ್ರ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ 31 ರಷ್ಟಕ್ಕೆ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದ್ದು, ಜುಲೈ 1 ರಿಂದ ಅನ್ವಯವಾಗಲಿದೆ. ಮೂಲ ವೇತನದ ಶೇ. 28 ರಷ್ಟು ಇದ್ದ ತುಟ್ಟಿಭತ್ಯೆ ಶೇಕಡ 31 ಕ್ಕೆ ಹೆಚ್ಚಳವಾಗಿದ್ದು, ರೈಲ್ವೆ ನೌಕರರು, ಸಶಸ್ತ್ರ ಪಡೆಗಳ ಸಿಬ್ಬಂದಿಯ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಸಚಿವಾಲಯಗಳು ಪ್ರತ್ಯೇಕ ಆದೇಶ ಹೊರಡಿಸಲಿದೆ.
ತುಟ್ಟಿಭತ್ಯೆ ಹೆಚ್ಚಳದಿಂದ 47.14 ಲಕ್ಷ ನೌಕರರು, 68.62 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇಕಡ 3 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲು ಕಳೆದ ವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.