alex Certify ನಿತ್ಯ 5 ಗಂಟೆ ಕೆಲಸ, ವಾರಕ್ಕೆ 300 ಕಿ.ಮೀ. ಪ್ರಯಾಣ: ಬಿಜೆಪಿ ಜಿಲ್ಲಾಧ್ಯಕ್ಷರಿಗೆ ವಿಜಯೇಂದ್ರ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿತ್ಯ 5 ಗಂಟೆ ಕೆಲಸ, ವಾರಕ್ಕೆ 300 ಕಿ.ಮೀ. ಪ್ರಯಾಣ: ಬಿಜೆಪಿ ಜಿಲ್ಲಾಧ್ಯಕ್ಷರಿಗೆ ವಿಜಯೇಂದ್ರ ಸೂಚನೆ

ಬೆಂಗಳೂರು: ಬಿಜೆಪಿಯ ಜಿಲ್ಲಾಧ್ಯಕ್ಷರು ನಿತ್ಯ ಕನಿಷ್ಠ 5 ಗಂಟೆ ಸಮಯವನ್ನು ಪಕ್ಷದ ಚಟುವಟಿಕೆಗಳಿಗೆ ಮೀಸಲಿಡಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ನೇಮಕವಾದ ಬಿಜೆಪಿ 39 ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷರೊಂದಿಗೆ ವಿಡಿಯೋ ಸಂವಾದ ನಡೆಸಿದ ವಿಜಯೇಂದ್ರ, ಸಂಘಟನೆಯ ಬಲವರ್ಧನೆ, ಲೋಕಸಭೆ ಚುನಾವಣೆ ಸಿದ್ಧತೆ ಬಗ್ಗೆ ಸಲಹೆ ಸೂಚನೆ ನೀಡಿದ್ದಾರೆ.

ಜಿಲ್ಲಾಧ್ಯಕ್ಷರು ನಿತ್ಯ ಕನಿಷ್ಠ 5 ಗಂಟೆ ಕಾಲ ಪಕ್ಷದ ಕಾರ್ಯ ಚಟುವಟಿಕೆಗೆ ಸಮಯ ಮೀಸಲಿಡಬೇಕು. ವಾರದಲ್ಲಿ ಕನಿಷ್ಠ 300 ಕಿಲೋ ಮೀಟರ್ ನಷ್ಟು ಸಂಘಟನಾ ಪ್ರಯಾಣ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಪಕ್ಷದ ಕಾರ್ಯಾಲಯಕ್ಕೆ ಬಂದು ಹೋಗುವುದು ಸಂಘಟನಾ ಪ್ರಯಾಣವೆನಿಸಿಕೊಳ್ಳುವುದಿಲ್ಲ. ಜಿಲ್ಲಾದ್ಯಂತ ಪ್ರವಾಸ ನಡೆಸಿ ಸಂಘಟನಾ ಸಭೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪಕ್ಷದ ಬಲ ಹೆಚ್ಚಿಸುವಂತೆ ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...