ಮಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಮೂವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದ ಆಶಾ ತಿಮ್ಮಪ್ಪ ಅವರಿಗೆ ಪುತ್ತೂರು ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಜಿಪಂ ಉಪಾಧ್ಯಕ್ಷರಾಗಿದ್ದ ಸತೀಶ್ ಕುಂಪಲ ಅವರಿಗೆ ಮಂಗಳೂರು ಕ್ಷೇತ್ರದಲ್ಲಿ ಟಿಕೆಟ್ ಸಿಕ್ಕಿದೆ. ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಭಾಗೀರಥಿ ಮುರುಳ್ಯ ಅವರಿಗೆ ಸುಳ್ಯ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.