ಮಂಗಳೂರು: ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಪ್ರವಾಸಿ ತಾಣ, ಗಿರಿ-ಶಿಖರ, ಜಲಾನಯನ ಪ್ರದೇಶಗಳಿಗೆ ಪ್ರವೇಶ ನಿರ್ಬಂಧ ಹೇರಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮಳೆಗಾಲ ಮುಗಿಯುವವರೆಗೂ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ವರುಣಾರ್ಭಟದಿಂದಾಗಿ ಹಲವೆಡೆ ಭೂಕುಸಿತ, ಗುಡ್ಡಕುಸಿತ ಸಂಭವಿಸಿದೆ. ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಲ್ಲಿ ಗಿರಿ-ಶಿಖರ ಭೇಟಿ, ಚಾರಣ, ಸಾಹಸ ಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗಿದೆ. ಜಲಪಾತ, ಝರಿ, ನದಿ, ಸಮುದ್ರ, ಜಲಾನಯನ ಪ್ರದೇಶಗಳಲ್ಲಿಯೂ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.
ನಿಯಮ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.