alex Certify ರಸ್ತೆ ಕ್ರಾಸ್ ಮಾಡುವಾಗ ದುರಂತ; ಕಾರು, ಬೈಕ್ ಭೀಕರ ಅಪಘಾತ; ಯುವತಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ಕ್ರಾಸ್ ಮಾಡುವಾಗ ದುರಂತ; ಕಾರು, ಬೈಕ್ ಭೀಕರ ಅಪಘಾತ; ಯುವತಿ ದುರ್ಮರಣ

ಮಂಗಳೂರು: ರಸ್ತೆ ಕ್ರಾಸ್ ಮಾಡುವಾಗ ಎಷ್ಟೇ ಜಾಗರೂಕರಾಗಿದ್ದರೂ ಕಡಿಮೆಯೆ. ರಸ್ತೆ ಕ್ರಾಸ್ ಮಾಡುವ ವೇಳೆ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಯುವತಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಕಾಸರಗೋಡು ಜಿಲ್ಲೆಯ ಬಾಕ್ರಬೈಲು ನಿವಾಸಿ ಪ್ರೀತಿಕಾ ಶೆಟ್ಟಿ (21) ಮೃತ ಯುವತಿ. ಬೈಕ್ ಸವಾರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಕಾರು ರಸ್ತೆ ಕ್ರಾಸ್ ಮಾಡುತ್ತಿದ್ದ ವೇಳೆ ಬೈಕ್ ಗೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಬೈಕ್ ನಲ್ಲಿದ್ದ ಯುವತಿ ರಸ್ತೆಗೆ ಬಿದ್ದಿದ್ದಾಳೆ. ಈ ವೇಳೆ ಯುವತಿಯ ತಲೆಗೆ ಗಂಭೀರವಾದ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾಳೆ.

ಮುಲ್ಕಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...