alex Certify ಮಹಿಳಾ ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಯತ್ನ

ಮಂಗಳೂರು: ಪುರಸಭೆ ಆರೋಗ್ಯಾಧಿಕಾರಿ, ಮೇಲಧಿಕಾರಿಯ ಕಿರುಕುಳ, ಮಾನಸಿಕ ಹಿಂಸೆಗೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.

ಡಾ.ರವಿಕೃಷ್ಣ ಪಣಚ ಮೇಲಧಿಕಾರಿ ಕಿರುಕುಳಕ್ಕೆ ನೊಂದು ಅತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರ ಸ್ಥಿತಿಗೆ ತಲುಪಿದ್ದ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ರವಿಕೃಷ್ಣ, ಪತ್ರದಲ್ಲಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಪ್ರತಿದಿನ ಮಾನಸಿಕ ಕಿರುಕುಳ ನೀಡುತ್ತಿದ್ದು, ಕಚೇರಿ ಸಿಬ್ಬಂದಿ ಇಕ್ಬಾಲ್ ಕೂಡ ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾನೆ. ಇದರಿಂದ ಪ್ರತಿದಿನ ಬೈಗುಳ, ಕಿರುಕುಳ, ಅವಮಾನ ಮಾಡಲಾಗುತ್ತಿದೆ. ಹೀಗಾಗಿ ಮುಖ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬರೆದಿಟ್ಟು ವಿಷ ಸೇವಿಸಿದ್ದರು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...