ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಒಟ್ಟು 12 ಮೇಜುಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ನಿಗದಿತ ಕೋಟಾವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆಯನ್ನು ಘೋಷಿಸಲಾಗುತ್ತದೆ.
ಕೋಟಾ ಶ್ರೀನಿವಾಸಪೂಜಾರಿ ಅವರಿಂದ ತೆರವಾದ ವಿಧಾನಪರಿಷತ್ ಸ್ಥಾನಕ್ಕೆ ಸೋಮವಾರ ಉಪಚುನಾವಣೆ ನಡೆದಿತ್ತು. ಒಟ್ಟು 392 ಮತಗಟ್ಟೆಗಳಲ್ಲಿ 5906 ಮತದಾರರು ಮತದಾನ ಮಾಡಿದ್ದರು.