ಮಂಗಳೂರು: ವಿಧಾನ ಪರಿಷತ್ ಉಪಚುನಾವಣಾ ಹಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಮೂರು ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದಿತ್ತು. ಅಂತಮವಾಗಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ವಿರುದ್ಧ ಬಿಜೆಪಿಯ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದಾರೆ.
ಸುಮಾರು 3,654 ಮಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕೋಟಾ ಶ್ರೀನಿವಾಸ್ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ಸೋಮವಾರ ಉಪಚುನಾವಣೆ ನಡೆದಿತ್ತು.