)
ತಮಿಳಿನ ಖ್ಯಾತ ನಟ ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಚಿತ್ರದ ಬಿಡುಗಡೆ ದಿನಾಂಕವನ್ನು ಇಂದು ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 15ಕ್ಕೆ ಈ ಸಿನಿಮಾ ತೆರೆ ಮೇಲೆ ಬರಲಿದೆ. ಈ ಕುರಿತು ಚಿತ್ರತಂಡ ಇಂದು ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ.
ವೆಂಕಟ್ ಪ್ರಭು ನಿರ್ದೇಶನದ ಈ ಚಿತ್ರದಲ್ಲಿ ದಳಪತಿ ವಿಜಯ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮೀನಾಕ್ಷಿ ಚೌಧರಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಇನ್ನುಳಿದಂತೆ ಪ್ರಶಾಂತ್, ಪ್ರಭುದೇವ, ಮೋಹನ್, ಜಯರಾಮ್, ಸ್ನೇಹ, ಜೋಗಿ ಬಾಬು, ಲೈಲಾ, ಗಣೇಶ್, ವೈಭವ್, ಅಜಯ್ ರಾಜ್, ಅರವಿಂದ ಆಕಾಶ್, ಪಾರ್ವತಿ ನಾಯರ್ ಉಳಿದ ಪಾತ್ರವರ್ಗದಲ್ಲಿದ್ದಾರೆ. ಎಜಿಎಸ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಲಾಗಿದೆ. ವೆಂಕಟ್ ಸಂಕಲನವಿದ್ದು, ಯುವನ್ ಶಂಕರ್ ರಾಜ ಸಂಗೀತ ಸಂಯೋಜನೆ ನೀಡಿದ್ದಾರೆ.