ಭೋಪಾಲ್ : ದೇಶಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ ಸಂಬಂಧ ವಿವಾದಾತ್ಮಕ ಟ್ವೀಟ್ ಮಾಡಿರುವ ಬೋಜ್ ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಗಾಯಕಿ ನೇಹಾ ಸಿಂಗ್ ರಾಥೋಡ್, ಟ್ವಿಟರ್ ನಲ್ಲಿ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ವ್ಯಕ್ತಿಯನ್ನು ಆರ್ ಎಸ್ ಎಸ್ ಸಂಘಟನೆಯ ಸದಸ್ಯನಂತೆ ಬಿಂಬಿಸಿ ಟ್ವೀಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಭೋಪಾಲ್ನ ಹಬೀಬ್ಗಂಜ್ ಪೊಲೀಸ್ ಠಾಣೆಯಲ್ಲಿ ನೇಹಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನೇಹಾ ಸಿಂಗ್ ಎಂಬ ಹೆಸರಿನ ಟ್ವಿಟ್ಟರ್ ಖಾತೆಯ ವಿರುದ್ಧ ಸೂರಜ್ ಎಂಬವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಗಾಯಕಿ ನೇಹಾ ಸಿಂಗ್ ವಿರುದ್ಧ ದೂರು ದಾಖಲಾಗಿದೆ.