ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಬೆಂಕಿ ಹಚ್ಚಿದ್ದು, ಜೋಧ್ ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ.
ಆರೋಪಿ ಶಕೂರ್ ಖಾನ್ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಕೊಲೆ ಆರೋಪವನ್ನು ಸೇರಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಏಪ್ರಿಲ್ 6 ರಂದು 30 ವರ್ಷದ ಮಹಿಳೆ ಮೇಲೆ ಖಾನ್ ಮನೆಯಲ್ಲಿ ಅತ್ಯಾಚಾರ ಎಸಗಿ ಸುಟ್ಟು ಹಾಕಿದ್ದಾನೆ. ಸುಮಾರು 50 ಪ್ರತಿಶತದಷ್ಟು ಸುಟ್ಟ ಗಾಯಗಳಾಗಿದ್ದ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದ ಜೋಧ್ಪುರದ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಮಹಿಳೆ ಸಾವನ್ನಪ್ಪಿದ್ದಾಳೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಬಾರ್ಮರ್ನ ಪೊಲೀಸ್ ವರಿಷ್ಠಾಧಿಕಾರಿ ದಿಗಂತ್ ಆನಂದ್ ತಿಳಿಸಿದ್ದಾರೆ.
ಘಟನೆಯ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ್ದು, ಇದು ರಾಜ್ಯದಲ್ಲಿ ‘ಜಂಗಲ್ ರಾಜ್’ ಚಾಲ್ತಿಯಲ್ಲಿದೆ ಎಂದು ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.