ಬೆಳಗಾವಿ: ದಲಿತರು ಮುಖ್ಯಮಂತ್ರಿ ಆಗಬೇಕೆಂಬ ಕೂಗು ಇಂದು, ನಿನ್ನೆದಲ್ಲ. ಈ ಕೂಗು ಮಲ್ಲಿಕಾರ್ಜುನ ಖರ್ಗೆ ಅವರಿಂದ ಆರಂಭವಾಗಿದ್ದು, ಕಾಂಗ್ರೆಸ್ ನಲ್ಲಿ ಮಾತ್ರವಲ್ಲ ಬಿಜೆಪಿ, ಜೆಡಿಎಸ್ ನಲ್ಲೂ ಇದೆ. ಆದರೆ ಇದುವರೆಗೆ ದಲಿತರು ಯಾವುದೇ ಪಕ್ಷದಲ್ಲಿ ಸಿಎಂ ಆಗಲು ಸಾಧ್ಯವಾಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತಮಾಡಿದ ಸಚಿವ ಸತೀಶ್ ಜಾರಕಿಹೊಳಿ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಕೊಡಿ ಎಂದು ಕೇಳಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್. ಸಿ. ಮಹದೇವಪ್ಪ ಅಸಮಾಧಾನ ವ್ಯಕ್ತಪಡಿಸಿದ ಕುರಿತು ಪ್ರತಿಕ್ರಿಯಿಸಿ,, ಕಳೆದ 20 ವರ್ಷದಿಂದ ಮಲ್ಲಿಕಾರ್ಜುನ ಖರ್ಗೆ, 2013ರಲ್ಲಿ ಡಾ. ಜಿ. ಪರಮೇಶ್ವರ್ ಅವರು ಸಿಎಂ ಆಗಬೇಕೆಂಬ ಕೂಗು ಇತ್ತು. ಆದರೆ ಅವರಿಬ್ಬರಿಗೂ ಸಿಎಂ ಆಗುವ ಭಾಗ್ಯ ಸಿಗಲಿಲ್ಲ. ನಾನು ಅನೇಕ ಸಮಾವೇಶಗಳಲ್ಲಿ ದಲಿತರು ಸಿಎಂ ಆಗಲೇಬೇಕೆಂದು ಹೇಳಿದ್ದೇನೆ ಎಂದರು.
ಎಸ್ಸಿ, ಎಸ್ಟಿ ಸಮಾಜದವರು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ. ನಮ್ಮ ಕಡೆ ಸೈನಿಕರು ಜಾಸ್ತಿ ಇದ್ದಾರೆ. ಸೈನಿಕರನ್ನು ಲೀಡ್ ಮಾಡುವ ಕ್ಯಾಪ್ಟನ್ ಇಲ್ಲ. ಕ್ಯಾಪ್ಟನ್ ಪಾತ್ರಗಳನ್ನು ರೆಡಿ ಮಾಡಬೇಕಿದೆ. ಹೈಕಮಾಂಡ್ ಎದುರು ಪ್ರಭಾವ ಬೀರುವಲ್ಲಿ ವಿಫಲರಾಗಿದ್ದೇವೆ ಎಂದು ಹೇಳಿದರು.