ಬೆಂಗಳೂರು: ಪರವಾನಿಗೆ ನಿಯಮ ಉಲ್ಲಂಘಿಸಿ ಅಕ್ರಮವಾಗಿ ನಡೆಯುತ್ತಿದ್ದ ಡ್ಯಾನ್ಸ್ ಬಾರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ 28 ಮಹಿಳೆಯರನ್ನು ರಕ್ಷಿಸಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಕೋರಮಂಗಲದ ಆರನೇ ಬ್ಲಾಕ್ ನಲ್ಲಿರುವ ಪಬ್, ಡ್ಯಾನ್ಸ್ ಬಾರ್ ನಲ್ಲಿ ನಿಯಮ ಉಲ್ಲಂಘಿಸಿ ಅಕ್ರಮವಾಗಿ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು, ಪರವಾನಿಗೆ ರದ್ದು ಮಾಡಲು ಬಿಬಿಎಂಪಿಗೆ ತಿಳಿಸಲಾಗಿದೆ. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.