
ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟನ್ನು ‘ಮಂಗನಾಟ’ವೆಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ.
ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಮಂಗಗಳ ನೃತ್ಯದಂತಿದೆ. ಕೋತಿಗಳು ಒಂದು ಕೊಂಬೆಯಿಂದ ಇನ್ನೊಂದಕ್ಕೆ ಜಿಗಿಯುವಂತೆ ಈ ಬೆಳವಣಿಗೆ ಇದೆ. ಶಿವಸೇನೆ ಮತ್ತು ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಸರ್ಕಾರದ ಆಂತರಿಕ ವಿಚಾರದಲ್ಲಿ ನಾನು ತಲೆ ಹಾಕುವುದಿಲ್ಲ ಎಂದು ಓವೈಸಿ ಹೇಳಿದರು.
ಬಂಡಾಯ ಸೇನಾ ನಾಯಕ ಏಕನಾಥ್ ಶಿಂಧೆ ಅವರು ತಮ್ಮ ಪಕ್ಷದ ಶಾಸಕರು ಮತ್ತು ಸ್ವತಂತ್ರ ಶಾಸಕರೊಂದಿಗೆ ಬಿಜೆಪಿ ಆಡಳಿತವಿರುವ ಗುಜರಾತ್ ಗೆ ತೆರಳಿದ ನಂತರ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಭುಗಿಲೆದ್ದಿದೆ.