
ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಜನಪ್ರಿಯ ಕಥೆ ‘ಡೇರ್ ಡೇವಿಲ್ ಮುಸ್ತಾಫಾ’ ಕಥೆಯನ್ನಾಧರಿಸಿ ಅದೇ ಹೆಸರಿನಲ್ಲಿ ಮೂಡಿ ಬಂದ ಚಲನಚಿತ್ರ ಇತ್ತೀಚೆಗೆ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಸಾಧಿಸಿತ್ತು.
ಈ ಚಿತ್ರ ಈಗಾಗಲೇ ಓ ಟಿ ಟಿ ಫ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದ್ದು, ಇದೀಗ ಓ ಟಿ ಟಿ ಸೌಲಭ್ಯ ಹೊಂದಿಲ್ಲದೆ ಇರುವವರಿಗೆ ವೀಕ್ಷಣೆಗೆ ಸಿಗುತ್ತಿದೆ.
ಸ್ಟಾರ್ ಸುವರ್ಣದಲ್ಲಿ ಇಂದು ಸಂಜೆ 6 ಗಂಟೆಗೆ ಈ ಚಲನಚಿತ್ರ ಪ್ರಸಾರವಾಗಲಿದ್ದು, ಬಹುತೇಕ ಹೊಸಬರೇ ಅಭಿನಯಿಸಿರುವ ಈ ಸಿನಿಮಾವನ್ನು ಕಣ್ತುಂಬಿಕೊಳ್ಳಬಹುದಾಗಿದೆ.
