ದೀಪಕ್ ಅರಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ಅಭಿನಯದ ರೋಮ್ಯಾಂಟಿಕ್ ಡ್ರಾಮಾ ಕಥಾ ಹಂದರ ಹೊಂದಿರುವ ‘ಶುಗರ್ ಫ್ಯಾಕ್ಟರಿ’ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಲಿದೆ.
ತನ್ನ ಟೈಟಲ್ ಮೂಲಕವೇ ಸಾಕಷ್ಟು ಸದ್ದು ಮಾಡಿರುವ ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಜೊತೆ ಅದ್ವಿತಿ ಶೆಟ್ಟಿ, ಸೋನಾಲ್, ಶಿಲ್ಪಾ ಶೆಟ್ಟಿ ಸೇರಿದಂತೆ ಮೂವರು ನಾಯಕಿಯರು ಅಭಿನಯಿಸಿದ್ದಾರೆ.
ಬಾಲಮಣಿ ಪ್ರೊಡಕ್ಷನ್ ಬ್ಯಾನರ್ ನಡಿ ಆರ್ ಗಿರೀಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸಂತೋಷ್ ರಾಯ್ ಛಾಯಾಗ್ರಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ. ಇಂದು ಸಂಜೆ 5;11ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ರಿಲೀಸ್ ಆಗಲಿದೆ.