ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಜೈಲುಪಾಲಾಗಿದ್ದು, ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ.
ಆರೋಪಿ ದರ್ಶನ್ ರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿರುವ ಪೊಲೀಸರು ಕೈದಿ ನಂಬರ್ ವಿತರಣೆ ಮಾಡಿದ್ದಾರೆ. ನಟ ದರ್ಶನ್ ಗೆ ವಿಚಾರಣಾಧೀನ ಕೈದಿ ನಂ- 6106 ನೀಡಲಾಗಿದೆ. ಈ ಮೂಲಕ ದರ್ಶನ್ ಗೆ ಜೈಲೂಟ ಫಿಕ್ಸ್ ಆಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳು ಜೈಲು ಪಾಲಾಗಿದ್ದು, ಜು.4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ , ಜು.4 ರವರೆಗೆ 12 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ
ಚಿತ್ರದುರ್ಗದ ರೇಣುಕಾ ಸ್ವಾಮಿ ದರ್ಶನ್ ಆಪ್ತೆ, ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ, ಫೋಟೋ ಕಳುಹಿಸಿದ್ದನು ಎನ್ನಲಾಗಿದೆ. ಪವಿತ್ರ ಗೌಡ ಕೂಡ ಈ ವಿಚಾರವನ್ನು ದರ್ಶನ್ ಗಮನಕ್ಕೆ ತಂದಿದ್ದರು . ನಂತರ ಯಾರೋ ಒಬ್ಬರು ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ರಾಘವೇಂದ್ರ ಎಂಬುವವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ. ನಂತರ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಕಾರ್ ಶೆಡ್ ಒಂದರಲ್ಲಿ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ್ದರು. ದರ್ಶನ್ ಅವರ ಸೂಚನೆ ಮೇರೆಗೆ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು. ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾಗುತ್ತಿರುವ ರೇಣುಕಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಯಿಸಲಾಗಿದೆ. ಜೂನ್ 8ರಂದು ಆತನನ್ನು ಶೆಡ್ ನಲ್ಲಿ ಇರಿಸಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ.