ಬೆಳಗಾವಿ: ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ದರ್ಶನ್ ಅಭಿಮನಿಗಳ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ಇಂದಿನಿಂದಲೇ ಅಭಿಮಾನಿಗಳು ದೀಪಾವಳಿ ಹಬ್ಬ ಆಚರಿಸುತ್ತಿದ್ದು, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಜಾಮೀನು ಮಂಜೂರಾಗಿದ್ದು, ರಾಜ್ಯಾದ್ಯಂತ ದರ್ಶನ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ದರ್ಶನ್ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ನಗರದ ಚನ್ನಮ್ಮ ವೃತ್ತದಲ್ಲಿ ಸೇರಿರುವ ದರ್ಶನ್ ಅಭಿಮಾನಿಗಳು ಪಟಾಕಿ ಸಿಡಿಸಿ, ದರ್ಶನ್ ಪರ ಘೋಷಣೆಗಳನ್ನು ಕೂಗಿ ಕುಣಿದು ಕುಪ್ಪಳಿಸಿದ್ದಾರೆ. ಇಂದೇ ದೀಪಾವಳಿ ಎಂಬಂತೆ ಸಂಭ್ರಮಾಚರಣೆ ಮಾಡಿದ್ದಾರೆ.
ಇನ್ನೊಂದೆಡೆ ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ದರ್ಶನ್ ನಿವಾಸದ ಬಳಿಯೂ ಅಭಿಮಾನಿಗಳ ದಂಡೇ ಹರಿದು ಬಂದಿದೆ. ಮುಂಜಾಗೃತಾ ಕ್ರಮವಾಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.