
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.
ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್, ಇಂದು ದರ್ಶನ್ ಪರ ವಕೀಲ ನಾಗೇಶ್ ಅವರ ವಾದ ಆಲಿಸಿತು. ಬಳಿಕ ನಾಳೆ ಮಧ್ಯಾಹ್ನ 12:30 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.
ಇಂದು ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.