ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ದರ್ಶನ್ ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ದರ್ಶನ್ ಕುಟುಂಬ ಹಾಗೂ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಇದೇ ವೇಳೆ ನಟಿ ರಕ್ಷಿತಾ ಪ್ರೇಮ್ ಕೂಡ ಸಂತಸ ವ್ಯಕ್ತಪಡಿಸಿದ್ದು, ದರ್ಶನ್ ಗೆ ಬೇಲ್ ಸಿಕ್ಕಿರುವುದು ಖುಷಿಯ ಸುದ್ದಿ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ವ್ಯಕ್ತಪಡಿಸಿರುವ ನಟಿ ರಕ್ಷಿತಾ, ಇದೊಂದು ಹ್ಯಾಪಿ ನ್ಯೂಸ್, ಹ್ಯಾಪಿ ಡೇ ಎಂದು ಖುಷಿ ಹಂಚಿಕೊಂಡಿದ್ದಾರೆ.