
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಂದು ಸಂಜೆ ವೇಳೆಗೆ ದರ್ಶನ್ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಬಿಡುಗಡೆ ಬಳಿಕ ನಟ ದರ್ಶನ್ ಬಳ್ಳಾರಿಯಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಪತ್ನಿ ವಿಜಯಲಕ್ಷ್ಮೀ ತಂದಿರುವ ಕಾರಿನಲ್ಲಿಯೇ ದರ್ಶನ್ ಬೆಂಗಳೂರಿಗೆ ಆಗಮಿಸಿದ್ದಾರೆ.
ಬಳ್ಳಾರಿಯಿಂದ ಅನಂತಪುರ ಮಾರ್ಗವಾಗಿ ಬೆಂಗಳೂರಿಗೆ ಬರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ನಾಳೆ ಒಂದು ದಿನ ಮನೆಯಲ್ಲಿದ್ದು, ಬಳಿಕ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲಿದ್ದಾರೆ.