ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಯ ಕನಕ ದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಟ ದರ್ಶನ್ ಗೆ ಜಾಮೀನು ಮಂಜೂರಾಗುತ್ತಿದ್ದಂತೆ ಬಳ್ಳಾರಿ ಜೈಲಿಗೆ ತೆರಳಿ, ಪತಿಯನ್ನು ಭೇಟಿಯಾದ ವಿಜಯಲಕ್ಷ್ಮೀ ಬಳಿಕ ಬಳ್ಳಾರಿಯ ಕನಕ ದುರ್ಗಮ್ಮ ದೇವಾಲಯಕ್ಕೆ ಆಗಮಿಸಿದರು. ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವಿಯ ಕೃಪೆಗೆ ಪಾತ್ರರಾದರು.
ದರ್ಶನ್ ಜೈಲು ಸೇರಿದದಿಂದಿನಿಂದ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸಿದ್ದರು. ಇಂದು ದರ್ಶನ್ ಗೆ ಜಾಮೀನು ಸಿಗುತ್ತಿದ್ದಂತೆ ‘ದೇವಿಯ ಆಶೀರ್ವಾದದಿಂದ ಜಾಮೀನು ಸಿಕ್ಕಿದೆ’ ಎಂದು ಕಾಮಾಕ್ಯ ದೇವಾಲಯದ ಫೋಟೋ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಬಳ್ಳಾರಿಯ ಕನಕ ದುರ್ಗಮ್ಮ ದೇವಿ ದರ್ಶನ ಪಡೆದಿರುವ ವಿಜಯಲಕ್ಷ್ಮೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.