
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಟ ದರ್ಶನ್ ಮತ ಬೇಟೆ ಮುಂದುವರೆದಿದೆ. ಇಂದು ಕೂಡ ದರ್ಶನ್ ಪ್ರಚಾರ ನಡೆಸಲಿದ್ದಾರೆ.
ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮಂಡ್ಯ ಕ್ಷೇತ್ರದಲ್ಲಿ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಅಕ್ಕಿಹೆಬ್ಬಾಳು, ಹರಿಹರಪುರ, ಹೊಸಹೊಳಲು, ಅಗ್ರಹಾರ, ಕಿಕ್ಕೇರಿ ಸೇರಿದಂತೆ ಹಲವು ಗ್ರಾಮಗಳಲ್ಲಿ ದರ್ಶನ್ ಪ್ರಚಾರ ನಡೆಸಲಿದ್ದಾರೆ.
ನಿನ್ನೆ ಮಳವಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿ ಅವರು ಪ್ರಚಾರ ಕೈಗೊಂಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ದರ್ಶನ್ ಕ್ಯಾಂಪೇನ್ ನಡೆಸಿದ್ದರು. ನಾನು ಪಕ್ಷದ ಪರವಾಗಿ ಬಂದಿಲ್ಲ. ವ್ಯಕ್ತಿ ಪರವಾಗಿ ಬಂದಿದ್ದೇನೆ. ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ ಎಂದು ದರ್ಶನ್ ಮತದಾರರಿಗೆ ಮನವಿ ಮಾಡಿದ್ದಾರೆ.