alex Certify ಮಂಡ್ಯದಲ್ಲಿಂದು ನಟ ದರ್ಶನ್ ಭರ್ಜರಿ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಡ್ಯದಲ್ಲಿಂದು ನಟ ದರ್ಶನ್ ಭರ್ಜರಿ ಪ್ರಚಾರ

ಮಂಡ್ಯ: ಮಂಡ್ಯದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಪ್ರಚಾರ ಕೈಗೊಂಡಿದ್ದಾರೆ. ಬೆಳಿಗ್ಗೆಯಿಂದ ಸಂಜೆಯವರೆಗೂ ಪ್ರಚಾರ ಕೈಗೊಂಡಿದ್ದಾರೆ. ಬೆಳಗ್ಗೆ 9:30ಕ್ಕೆ ಮಂಡ್ಯ ಜಿಲ್ಲೆ ಹಲಗೂರು ಪಟ್ಟಣದಿಂದ ಪ್ರಚಾರ ಆರಂಭಿಸಲಿದ್ದು, ಕಾಂಗ್ರೆಸ್ ಪರ ಮತಯಾಚಿಸಲಿದ್ದಾರೆ.

ಈ ಹಿಂದೆ ಸಂಸದೆ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ನಡೆಸುವುದಾಗಿ ದರ್ಶನ್ ಹೇಳಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಈ ಬಾರಿ ಸ್ಪರ್ಧಿಸಿಲ್ಲ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಎನ್.ಡಿ.ಎ. ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರ ಪರವಾಗಿ ನಟರಾದ ದರ್ಶನ್ ಮತ್ತು ಯಶ್ ಅವರು ಭರ್ಜರಿ ಪ್ರಚಾರ ನಡೆಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...