
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶ ಹಾಗೂ ಗ್ಯಾಂಗ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೆಗೌಡ, ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ದರ್ಶನ್ ಬಂಧನ ವಿಚಾರವಾಗಿ ಪೊಲೀಸರ ಮೇಲೆ ಜನರಿಗೆ ನಂಬಿಕೆ, ಗೌರವ ಹೆಚ್ಚಾಗಿದೆ. ಈ ವಿಚಾರವನ್ನು ಮುಖ್ಯಮಂತ್ರಿಗಳೇ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚಿಸಿದ್ದಾರೆ ಎಂದರು.
ಸ್ವತಃ ನಾನೇ ವಿಡಿಯೋ ನೋಡಿದ್ದೇನೆ ಎಂದು ಸಿಎಂ ಹೇಳಿದ್ದಾರೆ. ಇದರಿಂದ ಯಾರೂ ದರ್ಶನ್ ಪರ ಮಾತನಾಡಬಾರದು ಎಂದು ಸೂಚನೆ ನೀಡಿದ್ದಾರೆ. ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.