ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ & ಗ್ಯಾಂಗ್ ಬಂಧನಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಯಾರಿಗೂ ಕೂಡ ಸೊಪ್ಪು ಹಾಕಲ್ಲ. ಒಂದು ವೇಳೆ ನಮ್ಮ ಪಕ್ಷದಲ್ಲಿ ಇದ್ದರೂ ತಪ್ಪಿತಸ್ಥರೇ. ಬೇರೆ ಪಕ್ಷದಲ್ಲಿ ಇದ್ದರೂ ತಪ್ಪಿತಸ್ಥರೇ, ತಪ್ಪು ಯಾರೂ ಮಾಡಿದ್ರೂ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಕೊಲೆ ಪ್ರಕರಣದಲ್ಲಿ ಬ್ರೀಫಿಂಗ್ ಮಾಡೋ ಅಧಿಕಾರಿಗಳು ಬಿಟ್ರೆ ಯಾರೂ ಇದರಲ್ಲಿ ಮಧ್ಯಪ್ರವೇಶ ಮಾಡಿಲ್ಲ. ಅದರ ಅವಶ್ಯಕತೆನೂ ಯಾರಿಗೂ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.