ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಪ್ರಮುಖ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನಟ ದರ್ಶನ್, ಪವಿತ್ರಾಗೌಡ, ನಾಗರಾಜು, ಅನುಕುಮಾರ್, ಜಗದೀಶ್, ಲಕ್ಷ್ಮಣ್, ಪ್ರದೋಶ್ ರಾವ್ ಸೇರಿದಂತೆ 7 ಆರೋಪಿಗಳಿಗೂ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಗ್ಯಾಂಗ್ ಗೆ 6 ತಿಂಗಳ ಬಳಿಕ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರಾಗಿದೆ.