ಬೆಂಗಳೂರು: ಗನ್ ಲೈಸೆನ್ಸ್ ಗಾಗಿ ನಟ ದರ್ಶನ್ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ನಾಳೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ.
ಗನ್ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ನಾಳೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ. ದರ್ಶನ್ ಪರ ವಕೀಲರಾದ ಸುನಿಲ್ ನಾಳೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು ತಾತ್ಕಾಲಿಕವಾಗಿ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡಿದ್ದಾರೆ. ಇದನ್ನು ಪ್ರಶ್ನಿಸಿ ದರ್ಶನ್ ಅರ್ಜಿ ಸಲ್ಲಿಸಲಿದ್ದಾರೆ.