ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್ ಆಗಿದೆ.
ನಾಳೆ ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಅರ್ಜಿ ವಿಚಾರಣೆ ಸಂದರ್ಭದಲ್ಲಿಯೇ ಇದೀಗ ದರ್ಶನ್, ಬೆಂಗಳೂರಿನ ಬಿಜಿಎಸ್ ಆಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋವೊಂದು ವೈರಲ ಆಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಫೋಟೋ ಮೂಲಕ ಅನುಕಂಪಗಿಟ್ಟಿಸಿಕೊಳ್ಳುವ ಯತ್ನವಿರಬಹುದೇ? ಎಂಬ ಚರ್ಚೆ ಕೂಡ ಆರಂಭವಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ 6 ವಾರಗಳ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದು, ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ವೈದ್ಯರು ದರ್ಶನ್ ಗೆ ಸರ್ಜರಿಗೆ ಸೂಚಿಸಿದ್ದರೂ ಸರ್ಜರಿ ಮಾಡಿಸಿಕೊಳ್ಳದೇ ವಿಳಂಬ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವರಲ್ ಆಗಿದೆ.