ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ನಟ ದರ್ಶನ್ ಸ್ಪೆಷಲ್ ಬ್ಯಾರಕ್ ನಿಂದ ಹೊರ ಬಂದು ಟೇಬಲ್, ಚೇರ್ ಹಾಕಿಕೊಂಡು ವಿಲ್ಸನ್ ಗಾರ್ಡನ್ ನಾಗ ಹಾಗೂ ಮತ್ತಿತರರ ಜೊತೆ ಸಿಗರೇಟ್ ಸೇದುತ್ತಾ, ಕಾಫಿ ಮಗ್ ಹಿಡಿದು ನಗುತ್ತಾ ಕುಳಿತಿರುವುದು ಹಾಗೂ ಜೈಲಿನಿಂದಲೇ ವಿಡಿಯೋ ಕಾಲ್ ಮಾಡಿರುವ ಘಟನೆ ಬಹಿರಂಗ ವಾಗಿರುವ ಬೆನ್ನಲ್ಲೇ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬುದಕ್ಕೆ ಪುಷ್ಠಿ ನೀಡಿದಂತಿದೆ.
ಈ ಬೆಳವಣಿಗೆ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದು, ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿದ್ದಾರೆ.
ಕಮಿಷ್ನರ್ ಬಿ. ದಯಾನಂದ್ ಹಾಗೂ ಕಾನೂನು ಸುವ್ಯವಸ್ಥೆ ವಿಭಗದ ಎಡಿಜಿಪಿ ಆರ್ ಹಿತೇಂದ್ರ ಕೂಡ ಗೃಹ ಸಚಿವರನ್ನು ಭೇಟಿಯಾಗಿದ್ದಾರೆ. ದರ್ಶನ್ ಗೆ ಜೈಲಿನಲ್ಲಿ ಸಿಗರೇಟ್, ವಿಡಿಯೋ ಕಾಲ್ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಲಲಾಗುತ್ತಿದೆ ಎಂಬ ಬಗ್ಗೆ ಗೃಹ ಸಚಿವರಿಗೆ ಮಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.