
ಬೆಂಗಳೂರು: ಕೊಲೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾಲ್ ಮಾಡಿದ್ದ ಆರೋಪಿ ಪೊಲೀಸರಿಂದ ತಪ್ಪಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಜೈಲಿನಲ್ಲಿದ್ದ ದರ್ಶನ್ ಗೆ ವಿಡಿಯೋ ಕಾಲ್ ಮಾಡಿದ್ದ ರೌಡಿ ಶೀಟರ್ ಧರ್ಮ ಪುತ್ರ ಸತ್ಯನ ವಿಡಿಯೋ ವೈರಲ್ ಆಗಿತ್ತು. ಪ್ರಕರಣ ಸಂಬಂಧ ಸತ್ಯನನ್ನು ವಶಕ್ಕೆ ಪಡೆಯಲು ಹೋದಾಗ, ಸತ್ಯ ಪೊಲೀಸರ ಕೈಗೆ ಸಿಗದೇ ಎಸ್ಕೇಪ್ ಆಗಿದ್ದಾನೆ ಎಂದು ತಿಳಿದುಬಂದಿದೆ.
ಬ್ಯಾಡರಹಳ್ಳಿ ಪೊಲೀಸರು ಆರೋಪಿ ಸತ್ಯನನ್ನು ವಶಕ್ಕೆ ಪಡೆದಿದ್ದಾರೆ ಎಂದು ಬೆಳಿಗ್ಗೆಯಷ್ಟೇ ತಿಳಿದುಬಂದಿತ್ತು. ಆದರೆ ಸಂಜೆ ವೇಳೆ ಆತ ಪೊಲೀಸರಿಗೆ ಸಿಗದೇ ಎಸ್ಕೇಪ್ ಆಗಿದ್ದಾನೆ ಎಂದು ತಿಳಿದುಬಂದಿದೆ.