ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸೋಮವಾರ ಭೇಟಿಯಾಗಿದ್ದಾರೆ.
ಇದೇ ವೇಳೆ ದರ್ಶನ್ ಅವರ ಗೆಳೆಯ, ನಟ ವಿನೋದ್ ಪ್ರಭಾಕರ್ ಕೂಡ ಇದ್ದರು. ಮೂವರ ಎದುರು ದರ್ಶನ್ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಮುಂದಿನ ಕಾನೂನು ಹೋರಾಟದ ಕುರಿತಾಗಿ ದರ್ಶನ್ ಪತ್ನಿಯೊಂದಿಗೆ ದರ್ಶನ್ ಚರ್ಚೆ ನಡೆಸಿದ್ದಾರೆ. ಜಾಮೀನಿಗೆ ಅರ್ಜಿ ಸಲ್ಲಿಸುವ ಕುರಿತಂತೆ ವಕೀಲರೊಂದಿಗೆ ವಿಜಯಲಕ್ಷ್ಮಿ ಮಾತನಾಡಿದ್ದಾರೆ. ಈ ಕುರಿತಾಗಿ ಜೈಲಿನಲ್ಲಿ ದರ್ಶನ್ ಅವರೊಂದಿಗೆ ಚರ್ಚೆ ನಡೆಸಿದ ಅವರು ದರ್ಶನ್ ಗೆ ಧೈರ್ಯ ತುಂಬಿದ್ದಾರೆ ಎಂದು ಹೇಳಲಾಗಿದೆ.