
ಕೊಲೆ ಕೇಸ್ ನಲ್ಲಿ ಜಾಮೀನು ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ನಟ ದರ್ಶನ್ ಸಿನಿಮಾ ಶೂಟಿಂಗ್ ನಡುವೆಯೇ ಟೆಂಪಲ್ ರನ್ ಆರಂಭಿಸಿದ್ದಾರೆ. ಕುಟುಂಬ ಸಮೇತರಾಗಿ ಕೇರಳದ ಪ್ರಸಿದ್ಧ ದೇವಾಲಯಕ್ಕೆ ಭೇಟಿ ನೀಡಿ ಶತ್ರು ಸಂಹಾರ ಪೂಜೆ ನೆರವೇರಿಸಿದ್ದಾರೆ.
ಕೇರಳದ ಕಣ್ಣೂರಿನ ಮಡಾಯಿಕಾವು ಶ್ರೀ ಭಗವತಿ ದೇವಸ್ಥಾನಕ್ಕೆ ನಟ ದರ್ಶನ್ ಭೇಟಿ ನೀಡಿದ್ದಾರೆ. ದರ್ಶನ್, ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್ ಜೊತೆ ಭಗವತಿ ದೇವಸ್ಥಾನಕ್ಕೆ ತೆರಳಿ ಅಲ್ಲಿ ಶತ್ರು ಸಂಹಾರ ಯಾಗ ನೆರವೇರಿಸಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ನಟ ದರ್ಶನ್ ಹಾಗೂ ಕುಟುಂಬದ ಜೊತೆಗೆ ನಟ ಧನ್ವೀರ್ ಕೂಡ ಸಾಥ್ ನೀಡಿದ್ದಾರೆ. ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ಪತಿ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯ ಲಕ್ಷ್ಮೀ ಹಲವು ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸಿದ್ದರು. ಈ ಹಿನ್ನೆಲೆಯಲ್ಲಿ ದರ್ಶನ್ ಬಿಡುಗಡೆ ಬಳಿಕ ಕುಟುಂಬ ಸಮೇತ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.