BREAKING NEWS: ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆತ್ಮಹತ್ಯೆ

ಬೆಂಗಳೂರು: ನಟ ದರ್ಶನ್ ಫರಮ್ ಹೌಸ್ ನಲ್ಲಿ ಮ್ಯಾನೇಜರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬಗ್ಗನದೊಡ್ಡಿ ಬಳಿಯಿರುವ ನಟ ದರ್ಶನ್ ಅವರ ದುರ್ಗ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಶ್ರೀಧರ್ (35) ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ತಿಂಗಳ ಹಿಂದೆಯೇ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ಈಗ ಬೆಳಕಿಗೆ ಬಂದಿದೆ.

ಮಾನಸಿಕ ಖಿನ್ನತೆಗೆ ಒಳಗಾಗಿ ಮ್ಯಾನೇಜರ್ ಶ್ರೀಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಫಾರ್ಮ್ ಹೌಸ್ ಪಕ್ಕದಲ್ಲಿ ರಕ್ತಕಾರಿ ಶ್ರೀಧರ್ ಸಾವನ್ನಪ್ಪಿದ್ದಾರೆ. ಶ್ರೀಧರ್ ಶವ ಕಂಡು ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆನೇಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಮೃತ ಶ್ರೀಧರ್ ಒಂದು ವರ್ಷ ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. 2 ಎಕರೆ 36 ಗುಂಟೆ ಪ್ರದೇಶದಲ್ಲಿರುವ ದುರ್ಗ ಫಾರ್ಮ್ ಹೌಸ್ ನ ಕಲ್ಲು ಬಂಡೆ ಮೇಲೆ ಶ್ರೀಧರ್ ಮೃತದೇಹ ಪತ್ತೆಯಾಗಿತ್ತು. ನನ್ನ ಸಾವಿಗೆ ನಾನೇ ಕಾರಣ. ಒಂಟಿತನ ಕಾಡುತ್ತಿದೆ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read