ಚಿತ್ರದುರ್ಗ : ‘ನನ್ನ ಮಗ ವಿಲವಿಲ ಒದ್ದಾಡಿ ಸತ್ತಂತೆ ದರ್ಶನ್ ಕೂಡ ಸಾಯ್ಬೇಕು’ಎಂದು ರೇಣುಕಾಸ್ವಾಮಿ ತಾಯಿ ಕಣ್ಣೀರಿಡುತ್ತಾ ಆಕ್ರೋಶ ಹೊರ ಹಾಕಿದ್ದಾರೆ.
ರೇಣುಕಾಸ್ವಾಮಿ ಅಂತ್ಯಕ್ರಿಯೆ ಬಳಿಕ ರುದ್ರಭೂಮಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರೇಣುಕಾಸ್ವಾಮಿ ತಾಯಿ ಬಿಕ್ಕಿ ಬಿಕ್ಕಿ ಅಳುತ್ತಾ ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪವಿತ್ರಾ ಗೌಡಳನ್ನು ಯಾವುದೇ ಕಾರಣಕ್ಕೂ ಬಿಡಬೇಡಿ, ನಮ್ಮ ವಂಶ ನಿರ್ವಂಶ ಮಾಡಿದಂತೆ ದರ್ಶನ್ ರನ್ನು ಸಾಯಿಸಬೇಕು. ನನ್ನ ಮಗ ವಿಲವಿಲ ಒದ್ದಾಡಿ ಸತ್ತಂತೆ ದರ್ಶನ್ ಕೂಡ ಸಾಯ್ಬೇಕು ಎಂದು ಆಕ್ರೋಶ ಹೊರಹಾಕಿದರು.
ರೇಣುಕಾಸ್ವಾಮಿ ಹತ್ಯೆ ಖಂಡಿಸಿ ಇಂದು ವಿವಿಧ ಸಂಘಟನೆಗಳಿಂದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ.