ಮೈಸೂರು: ಕೊಲೆ ಕೇಸ್ ನಲ್ಲಿ ಜೈಲು ಸೇರಿ ಜಾಮೀನು ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್, ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿರುವ ನಟ ದರ್ಶನ್ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಿನ್ನೆ ಮಂಡ್ಯ ಜಿಲ್ಲೆಯ ಆರತಿ ಉಕ್ಕಡಕ್ಕೆ ಭೇಟಿ ನೀಡಿದ್ದ ದರ್ಶನ್, ಶಕ್ತಿ ದೇವತೆ, ಅಹಲ್ಯಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿರುವ ದರ್ಶನ್ ನಾಡ ಅದಿದೇವತೆ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಕಷ್ಟ ನಿವಾರಣೆ ಪ್ರಾರ್ಥಿಸಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಗ್ಯಾಂಗ್ ಜಾಮೀನಿನ ಮೇಲೆ ಬಿಡುಗಡೆಯಾಗಿದೆ. ಬಿಡುಗಡೆ ಬಳಿಕ ದರ್ಶನ್ ಕುಟುಂಬದ ಜೊತೆ ಕಾಲಕಳೆಯುತ್ತಿದ್ದಾರೆ. ಮೊನ್ನೆಯಷ್ಟೇ ಪತ್ನಿ ಹಾಗೂ ಮಗ, ಸಹೋದರನ ಜೊತೆ ಫಾರ್ಮ್ ಹೌಸ್ ನಲ್ಲಿ ಸಂಕ್ರಾಂತಿ ಹಬ್ಬ ಆಚರಿಸಿದ್ದರು.