ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.
ಹೈಕೋರ್ಟ್ ನಲ್ಲಿ ಇಂದು ಕೊಲೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್ ಮೊದಲಾದವರ ಜಾಮಿನು ಅರ್ಜಿ ವಿಚಾರಣೆ ನಡೆಯಿತು. ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳ ಪರ ವಕೀಲರು ವಾದ ಮಂಡಿಸಿದರು.
ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.