ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿರುವ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಗೃಹ ಇಲಾಖೆ ಅನುಮತಿ ನೀಡಿದೆ.
ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಮತ್ತು ಇತರೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ವಿರುದ್ಧ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದು, ಗೃಹ ಇಲಾಖೆ ಪತ್ರ ಬರೆದು ಅನುಮತಿ ಕೋರಿತ್ತು.
ಈ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಪಡೆದ ಗೃಹ ಇಲಾಖೆ ಪರಿಶೀಲನೆ ನಡೆಸಿದೆ. ಪೊಲೀಸರ ಮನವಿಗೆ ಅಸ್ತು ಎಂದಿದೆ. ಗೃಹ ಇಲಾಖೆಯ ಅಧಿಕೃತ ಆದೇಶದ ಪ್ರತಿ ಸೋಮವಾರ ಪೊಲೀಸರ ಕೈ ಸೇರುವ ಸಾಧ್ಯತೆ ಇದೆ. ಇನ್ನು ನಾಲ್ಕೈದು ದಿನಗಳಲ್ಲಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ.