alex Certify JDS ಸಂಸದ ಪ್ರಜ್ವಲ್ ರೇವಣ್ಣ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JDS ಸಂಸದ ಪ್ರಜ್ವಲ್ ರೇವಣ್ಣ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಬೆಂಬಲಿಗರು ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿಯಾಗಿದ್ದಾರೆ.

ಇದೇ ಸಂದರ್ಭದಲ್ಲಿ ಅವರು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕುಟುಂಬದ ಆತಿಥ್ಯ ಸ್ವೀಕರಿಸಿದ್ದಾರೆ. ಬೆಂಗಳೂರಿನಿಂದ ಪ್ರಜ್ವಲ್ ಅವರೊಂದಿಗೆ ಆಗಮಿಸಿದ ದರ್ಶನ್ ಅವರನ್ನು ಜೆಡಿಎಸ್ ಬೆಂಬಲಿಗರು, ಅಭಿಮಾನಿಗಳು ಸ್ವಾಗತಿಸಿದ್ದಾರೆ. ದರ್ಶನ್ ಆಗಮನದ ಸುದ್ದಿ ತಿಳಿದ ಅಪಾರ ಸಂಖ್ಯೆಯ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದಾರೆ.

ಪ್ರಜ್ವಲ್ ರೇವಣ್ಣ ಅವರೊಂದಿಗೆ 8 ವರ್ಷಗಳಿಂದ ಗೆಳೆತನವಿದೆ ಎಂದು ಹೇಳಿದ ದರ್ಶನ್ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ನೂಕುನುಗ್ಗಲು ಉಂಟಾಗಿದೆ ರೇವಣ್ಣ ನಿವಾಸಕ್ಕೆ ಆಗಮಿಸಿದ ದರ್ಶನ್ ಆತಿಥ್ಯ ಸ್ವೀಕರಿಸಿ ಅಲ್ಲಿಂದ ತೆರಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...