alex Certify ಸಣ್ಣ, ಅತಿ ಸಣ್ಣ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ದರ್ಶನ್ ಪುಟ್ಟಣ್ಣಯ್ಯ ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಣ್ಣ, ಅತಿ ಸಣ್ಣ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ದರ್ಶನ್ ಪುಟ್ಟಣ್ಣಯ್ಯ ಒತ್ತಾಯ

ಬೆಂಗಳೂರು: ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕಳೆದ ಎರಡು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಗಾರು ಮಳೆ ವೈಫಲ್ಯವಾಗಿರುವುದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತೀವ್ರ ತೊಂದರೆಯಾಗಿದೆ. ಹೀಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಆತ್ಮಹತ್ಯೆಗೊಳಗಾದ ರೈತರಲ್ಲಿ 18 ಜನ ಹಾವೇರಿ ಜಿಲ್ಲೆಗೆ ಸೇರಿದವರಾಗಿದ್ದಾರೆ. ಮುಂಗಾರು ವೈಫಲ್ಯದಿಂದ ಎರಡೆರಡು ಬಾರಿ ಬಿತ್ತನೆ ಮಾಡಿದರೂ ಬೆಳೆ ಬೆಳೆಯದೆ ಸಾಲ ತೀರಿಸಲು ಸಾಧ್ಯವಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೊಂದ ಅನೇಕ ಸಣ್ಣ, ಅತಿ ಸಣ್ಣ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ರೈತರ ನೆರವಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು. ರೈತರ ಆತ್ಮಹತ್ಯೆ ತಡೆಯಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...